ಬಂಟ್ವಾಳ: ತಾಲೂಕು ಮಟ್ಟದ ಸ್ಪರ್ಧೆ: ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಧನೆ
ಕಲ್ಲಡ್ಕ: ರಾಷ್ಟ್ರೀಯ ಮತದಾರರ ಆಚರಣೆಯ ಪ್ರಯುಕ್ತ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಸಲುವಾಗಿ ಸರಕಾರಿ ಪದವಿಪೂರ್ವ ಕಾಲೇಜು ಬಿ ಮೂಡದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ವಾಣಿಜ್ಯ ವಿಭಾಗದ ಕು.ಫಾತಿಮಾ ಅರ್ಝ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ದ್ವಿತೀಯ ಕಲಾ ವಿಭಾಗದ ಕು. ಫಾತಿಮತ್ ಶಮಿಯ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಕು.ಅಮಾನ ಫಾತಿಮಾ ಭಿತ್ತಿ ಚಿತ್ರ ರಚನೆಯಲ್ಲಿ ತೃತೀಯ ಸ್ಥಾನ ಪಡೆದು ವಿಜೇತರಾಗಿರುತ್ತಾರೆ