December 23, 2024

ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕದಲ್ಲಿ ಪದವಿ ಪ್ರದಾನ ಸಮಾರಂಭ

0

ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜನಾಬ್।ಮುಹಮ್ಮದ್ ಕುಂಞಿ ರಾಜ್ಯಾಧ್ಯಕ್ಷರು, ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಇವರು – ಪದವಿ ಪಡೆಯುವುದರ ಜೊತೆಗೆ ಮಾನವೀಯ ಗುಣವನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು, ಮೌಲ್ಯಾಧಾರಿತವಲ್ಲದ ಶಿಕ್ಷಣ ಪ್ರಯೋಜನಕಾರಿ ಅಲ್ಲ ಎಂದು ತಮ್ಮ ಅತಿಥಿ ಭಾಷಣದಲ್ಲಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಯಾಸಿನ್ ಬೇಗ್ ರವರು ಪದವಿಯಲ್ಲಿ ಉತ್ತಮ ಫಲಿತಾಂಶ ಗಳಿಸಿದ ವಿದ್ಯಾರ್ಥಿನಿಗಳ ಸಾಧನೆಯನ್ನು ಶ್ಲಾಘಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಹೇಮಲತ ಬಿ.ಡಿ ಯವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಪರಿಚಯಿಸಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಶ್ರೀಯುತ ಶಾಹುಲ್ ಹಮೀದ್, ಸಂಚಾಲಕ ಶ್ರೀಯುತ ಅಮಾನುಲ್ಲಾ ಖಾನ್ ಮತ್ತು ಕೋಶಾಧಿಕಾರಿ ಶ್ರೀಯುತ ಹೈದರ್ ಅಲಿ ಉಪಸ್ಥಿತರಿದ್ದರು.

 

 

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಜೊತೆಕಾರ್ಯದರ್ಶಿ ಸುಲೈಮಾನ್ ಜಿ, ಸದಸ್ಯರಾದ ಅಬ್ದುಲ್ಲ ಕುಂಞಿ ಮತ್ತು ಕಾಲೇಜಿನ ಸಲಹಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಮಮಿತಾ ಎಸ್ ರೈ, ಮತ್ತು ಸದಸ್ಯರು ಉಪಸ್ಥಿತರಿದ್ದರು.

ಪೋಷಕರು,ಬೋಧಕ – ಬೋಧಕೇತರ ವೃಂದದವರು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿ -ಅಭ್ಯಾಗತರು ಪದವೀಧರರಿಗೆ ಪದವಿ ಪ್ರದಾನ ಮಾಡುವುದರ ಜೊತೆಗೆ ಕಾಲೇಜಿನಲ್ಲಿ ನಡೆದ ವಾರ್ಷಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ವಿತರಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕುಮಾರಿ ಫಾತಿಮಾ-ಅಂತಿಮ ಬಿ.ಕಾಂ ಸ್ವಾಗತಿಸಿ ,ಫಾತಿಮಾತುಲ್ ಶೈಮಾ ಅಂತಿಮ ಬಿ.ಎ ನಿರೂಪಿಸಿ, ಕುಮಾರಿ ಆರ್ಶಿಬ ಕಾತುನ್ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!