February 3, 2026

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಹೋರಾಟ: ಎನ್ ಎಸ್ ಯು ಐ

0
IMG-20211202-WA0013.jpg

ಸುಳ್ಯ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಶಿಕ್ಷಣ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಹೋರಾಟ ಮುಂದುವರಿಯಲಿದೆ ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಇವರು ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರಕಾರ ತರಾತುರಿಯಲ್ಲಿ ಜಾರಿಗೊಳಿಸಲು ಹೊರಟಿದೆಯಾದರು ಈ ಬಗ್ಗೆ ಶಾಲಾ ಕಾಲೇಜುಗಳ ಪ್ರಾಂಶುಪಾಲರಿಗಾಗಲೀ, ವಿಧ್ಯಾರ್ಥಿಗಳಿಗಾಗಲಿ ಅಥವಾ ಜನಸಾಮಾನ್ಯರಿಗಾಗಲಿ ಯಾವುದೇ ಅರಿವು ಇಲ್ಲದಾಗಿದೆ. ಐದು ಶಿಕ್ಷಣ ವ್ಯವಸ್ಥೆಯನ್ನೇ ಹಿಂದಕ್ಕೆ ತಳ್ಳುವ ನೀತಿಯಾಗಿದ್ದು, ದೇಶದ ಶೇ. 30ರಷ್ಟಿರುವ ವಿದ್ಯಾರ್ಥಿ ಸಮುದಾಯವನ್ನು ಗುರಿಯಾಗಿಸಿ ಅವರ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ನೀಡುವ ಕುತಂತ್ರ ಎಂದು ಅವರು ಹೇಳಿದರು. ಇದು ಯಾವುದೇ ರೀತಿಯ ರಾಜಕೀಯ ಪ್ರೇರಿತ ವಿರೋಧವಲ್ಲ. ಈ ನೀತಿಯನ್ನು ತಜ್ಞರ ಸಲಹೆ ಪಡೆದು ಚರ್ಚಿಸಿ, ಆತಪ್ಪುಗಳನ್ನು ಸರಿಪಡಿಸಿ ಜಾರಿಗೊಳಿಸಬೇಕೆಂಬುದು ನಮ್ಮ ಆಗ್ರಹ ಎಂದರು.

ಬಾಲ್ಯದ 5 ರಿಂದ 7 ವರ್ಷಗಳ ಅವಧಿ ಶಿಕ್ಷಣದ ಬಗ್ಗೆ ಮಾನಸಿಕವಾಗಿ ಸಿದ್ಧತೆಯ ಅವಧಿ. ಆ ಸಂದರ್ಭ ಅವರಿಗೆ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವ ಬದಲು ಈ ನೀತಿಯ ಪ್ರಕಾರ ಅವರಿಗೆ ಮನಬಂದಂತೆ ಕಲಿಕೆಯ ಅವಕಾಶ ಅವರ ಭವಿಷ್ಯಕ್ಕೆ ನೀಡುವ ತೊಂದರೆಯಾಗಿದೆ. ಬೋರ್ಡ್ ಪರೀಕ್ಷೆಗಳ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದಿರುವುದು, ನಾಲ್ಕು ವರ್ಷಗಳ ಪದವಿ ಅವಧಿಯಲ್ಲಿ ಯಾವುದೇ ವರ್ಷದಲ್ಲಿ ಹೊರಹೋಗುವ ಅವಕಾಶವು ಉನ್ನತ ಶಿಕ್ಷಣದಿಂದ ಯುವ ಪೀಳಿಗೆಯನ್ನು ವಂಚಿತರನ್ನಾಗಿಸುವುದಾಗಿ ಎಂದು ಅವರು ವಿಶ್ಲೇಷಿಸಿದರು.

Leave a Reply

Your email address will not be published. Required fields are marked *

error: Content is protected !!