December 23, 2024

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ವೇಳೆ ಭದ್ರತಾ ಲೋಪ: ಎಸ್ಪಿ ಅಧಿಕಾರಿ ಅಮಾನತು

0

ಪಂಜಾಬ್: ಕಳೆದ ವರ್ಷ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪಂಜಾಬ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೇಣಿಯ ಅಧಿಕಾರಿಯನ್ನು ಗುರ್ಬಿಂದರ್ ಸಿಂಗ್ ಇದೀಗ ಅಮಾನತುಗೊಳಿಸಲಾಗಿದೆ ಎಂದು scroll.in ವರದಿ ಮಾಡಿದೆ.

ಪಂಜಾಬ್ ಗೃಹ ಇಲಾಖೆ ಬುಧವಾರ ಹೊರಡಿಸಿದ ಆದೇಶದ ಪ್ರಕಾರ, ಪ್ರಸ್ತುತ ಬಟಿಂಡಾ ಜಿಲ್ಲೆಯಲ್ಲಿ ಎಸ್ಪಿಯಾಗಿ ನೇಮಕಗೊಂಡಿರುವ ಸಿಂಗ್ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.

 

 

ಭದ್ರತಾ ಲೋಪ ನಡೆದ ಸಮಯದಲ್ಲಿ ಗುರ್ಬಿಂದರ್ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ಫಿರೋಜ್‌ಪುರದಲ್ಲಿ ನೆಲೆಸಿದ್ದರು. ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನಾಕಾರರು ರಸ್ತೆಯನ್ನು ತಡೆದಿದ್ದರಿಂದ ಅವರ ಬೆಂಗಾವಲು ಮೇಲ್ಸೇತುವೆಯಲ್ಲಿ ಸಿಲುಕಿದ ಕಾರಣ ಜನವರಿ 5 ರಂದು ಫಿರೋಜ್‌ಪುರದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು. ರ್ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗದೆ ಪ್ರಧಾನಿ ಪಂಜಾಬ್‌ನಿಂದ ದೆಹಲಿಗೆ ಹಿಂತಿರುಗಿದ್ದರು.

Leave a Reply

Your email address will not be published. Required fields are marked *

error: Content is protected !!