ಸಂಖ್ಯಾ ಶಾಸ್ತ್ರದ ಪ್ರಕಾರ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡ ಸಂಸದ ಪ್ರತಾಪ್ ಸಿಂಹ
ಮೈಸೂರು: ಸಂಸದ ಪ್ರತಾಪ್ ಸಿಂಹ ಅವರು ಸಂಖ್ಯಾ ಶಾಸ್ತ್ರದ ಪ್ರಕಾರ ತಮ್ಮ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.
ಸಂಖ್ಯಾ ಶಾಸ್ತ್ರವನ್ನು ರಾಜಕಾರಣಿಗಳು, ಸಿನಿಮಾದವರು ಹೆಚ್ಚಾಗಿ ನಂಬುತ್ತಾರೆ. ಅದರ ಪ್ರಕಾರ ಅವರು ತಮ್ಮ ಹೆಸರನ್ನು ಬದಲಿಸಿಕೊಳ್ಳುತ್ತಾರೆ. ಈಗ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಕೂಡ ಹೆಸರು ಬದಲಿಸಿಕೊಂಡಿದ್ದಾರೆ.
ಸಂಖ್ಯಾಶಾಸ್ತ್ರ ಪ್ರಕಾರ ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ.