ವಿಟ್ಲ: ಸುಪ್ರಜಿತ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ: ರೂ. 39 ಲಕ್ಷದಷ್ಟು ವಿದ್ಯಾರ್ಥಿ ವೇತನ ವಿತರಣೆ
ವಿಟ್ಲ, ಬೆಂಗಳೂರು ಸುಪ್ರಜಿತ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ವಿಟ್ಠಲ ಎಜುಕೇಶನ್ ಸೊಸೈಟಿಯ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಸುಮಾರು 650 ವಿದ್ಯಾರ್ಥಿಗಳಿಗೆ 39 ಲಕ್ಷದಷ್ಟು ವಿದ್ಯಾರ್ಥಿ ವೇತನ ವಿತರಿಸಲಾಯಿತು. ಸುಪ್ರಜಿತ್ ಫೌಂಡೇಶನ್ ನ ಅಧ್ಯಕ್ಷ ಅಜಿತ್ ಕುಮಾರ್ ರೈ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ವೇತನ ಸಮಿತಿ ಅಧ್ಯಕ್ಷ ಸುಬ್ರಾಯ ಪೈ, ವಿಟ್ಠಲ ಸುಪ್ರಜಿತ್ ಐಟಿಐ ಸಂಚಾಲಕ ಮತ್ತು ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ಎಲ್ ಎನ್ ಕೂಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ವೈಸ್ ಪ್ರಿನ್ಸಿಪಾಲ್ ಕಿರಣ್ ಕುಮಾರ್ ಬ್ರಹ್ಮಾವರ್ ವಂದಿಸಿದರು. ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ ನಿರೂಪಿಸಿದರು. ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ, ಪ್ರಕಾಶ್ ನಾಯಕ್,ಶ್ರೀಪತಿ ನಾಯಕ್, ಸೋಮಶೇಖರ್ ಹೆಚ್, ಲಕ್ಷ್ಮಣ ನಾಯ್ಕ್, ಮೋಹನ್ ಬಿ, ಅಣ್ಣಪ್ಪ ಸಾಸ್ತಾನ, ರವಿಚಂದ್ರ ಸಹಕರಿಸಿದರು. ವಿಟ್ಠಲ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಸದಸ್ಯರುಗಳಾದ ನಿತ್ಯಾನಂದ ನಾಯಕ್, ರವಿಪ್ರಕಾಶ್, ಸದಾಶಿವ ಬನ, ವಿಟ್ಠಲ ಸುಪ್ರಜಿತ್ ಐಟಿಐ ಕಾರ್ಯದರ್ಶಿ ಶ್ರೀಪ್ರಕಾಶ್, ಪ್ರಿನ್ಸಿಪಾಲ್ ರಮೇಶ್ ರೈ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ನಾರಾಯಣ್ ನಾಯಕ್, ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ವಿಟ್ಠಲ ಸುಪ್ರಜಿತ್ ಐಟಿಐಯ ಶೇಕಡಾ 50 ಕ್ಕಿಂತ ಅಧಿಕ ಅಂಕ ಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.