ಸಿಡಿಲು ಬಡಿದು 20 ಮಂದಿ ಸಾವು, ಕೆಲವರು ಗಾಯ
ಗಾಂಧಿನಗರ: ಗುಜರಾತ್‌ನಲ್ಲಿ ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು ಬಡಿದು 20 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ನಡೆದಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗುಜರಾತ್‌ನ ವಿವಿಧ ನಗರಗಳಲ್ಲಿ ಪ್ರತಿಕೂಲ ಹವಾಮಾನ ಮತ್ತು ಸಿಡಿಲಿನಿಂದ ಅನೇಕರು ಸಾವನ್ನಪ್ಪಿದ್ದಾರೆ.
ಸುದ್ದಿ ತಿಳಿದು ಅತೀವ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತುಂಬಲಾರದ ನಷ್ಟವಾಗಿದೆ. ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಾ ಸಂತಾಪ ಸೂಚಿಸಿದ್ದಾರೆ.