December 22, 2024

ವಂಚನೆ ಪ್ರಕರಣ: ‘ಬಿಟಿವಿ’ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕನ ಬಂಧನ

0

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ‘ಬಿಟಿವಿ’ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ಕುಮಾರ್‌ನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಂಚನೆ ಪ್ರಕರಣದ ಆರೋಪಿಯಾಗಿರುವ ಬಿ.ಎಂ. ಕುಮಾರ್‌ನನ್ನು ವಿಜಯನಗರ ಠಾಣೆ ಪೊಲೀಸರು ನಿನ್ನೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಬಿ.ಎಂ. ಕುಮಾರ್‌ನನ್ನು ಮುಂದಿನ ೧೪ ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

 

ಬಿಟಿವಿ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಅಲಿಯಾಸ್ ಮುನೀಂದ್ರಕುಮಾರ್ ವಿರುದ್ಧ 2020 ರಲ್ಲಿ ಅಶ್ವಿನ್ ಮಹೇಂದ್ರ ಎಂಬುವರು ವಿಜಯನಗರ ಠಾಣೆಗೆ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿತ್ತು.

ದೂರುದಾರ ಅಶ್ವಿನ್ ಮಹೇಂದ್ರ ಹಾಗೂ ಕುಮಾರ್ ಇಬ್ಬರೂ ಪಾಲುದಾರಿಕೆಯಲ್ಲಿ ಈಗಲ್ ಸೈಟ್ ಮಿಡಿಯಾ ಕಂಪನಿ ಆರಂಭಿಸಿದ್ದರು. ಇಬ್ಬರೂ ಕಂಪನಿ ನಿರ್ದೇಶಕರಾಗಿದ್ದರು.

ಆರೋಪಿ ಕುಮಾರ್ ಒಬ್ಬರೇ ಕಾನೂನುಬಾಹಿರವಾಗಿ ಆಡಳಿತ ಮಂಡಳಿ ಸಭೆ ನಡೆಸಿ ದಾಖಲಾತಿಗಳನ್ನು ದುರ್ಬಳಕೆ ಮಾಡಿಕೊಂಡು ಬ್ಯಾಂಕ್ ಖಾತೆ ತೆರೆದು ಕೋಟಿಗೂ ಹೆಚ್ಚು ವಹಿವಾಟು ನಡೆಸಿದ್ದರು ಎಂಬ ಆರೋಪವಿತ್ತು.

Leave a Reply

Your email address will not be published. Required fields are marked *

error: Content is protected !!