March 18, 2026

ಮಂಗಳೂರು: ಶಾರ್ಟ್ ಸರ್ಕ್ಯೂಟ್‌ ಬೆಂಕಿ ಅನಾಹುತ: ವೃದ್ಧೆ ಗಂಭೀರ

0
image_editor_output_image739134650-1701152477989.jpg

ಕಂಕನಾಡಿ: ನಗರದ ಅತ್ತಾವರದ ಐವರಿ ಟವರ್‌ನಲ್ಲಿ‌ ಮಂಗಳವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.

ಗಾಯಗೊಂಡ ವೃದ್ಧೆಯೊಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಇನ್ನೊಬ್ಬರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮನೆಯಲ್ಲಿ ಹಲವು ಮಂದಿಯಿದ್ದು, ಘಟನೆ ಸಂಭವಿಸಿದ ತಕ್ಷಣ ಅವರು ಹೊರಗೆ ಬಂದು ಪಾರಾಗಿದ್ದಾರೆ. ಆದರೆ ವೃದ್ಧೆಯೊಬ್ಬರು ಬಾತ್ ರೂಮ್‌ನಲ್ಲಿದ್ದ ಕಾರಣ ಹೊರಗೆ ಬರಲಾಗದೆ ಸಿಲುಕಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!