December 22, 2024

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್:
ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಯತ್ನಾಳ್

0

ಬೆಂಗಳೂರು: ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈಗಾಗಲೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಮೇಲಿನ ಕೇಸ್ ಸಂಬಂಧ ತೆಗೆದುಕೊಂಡ ನಿರ್ಧಾರದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದರು. ಅಲ್ಲದೇ ತಾವು ಸರ್ಕಾರದ ಕ್ರಮವನ್ನು ಕೋರ್ಟ್ ನಲ್ಲಿ ಪ್ರಶ್ನಿಸೋದಾಗಿಯೂ ತಿಳಿಸಿದ್ದರು.

ವಿಚಾರಣೆಗೆ ಬಾಕಿ ಇರುವಾಗ ಮೇಲ್ಮನವಿಯಲ್ಲೇ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಯತ್ನಾಳ್ ಮನವಿ ಮಾಡಿದ್ದಾರೆ.

 

 

ಇದೀಗ ಅದರಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!