ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದಿರುವುದಕ್ಕೆ ಶಾಸಕ ಬಸವರಾಜ ಯತ್ನಾಳ್ ಅವರು ಉಚ್ಛನ್ಯಾಯಾಲಯದಲ್ಲಿ ದಾವೆ ಹೂಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ರಾಜ್ಯ ಸರ್ಕಾರ ಡಿ.ಕೆ ಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನು ಬಾಹಿರವಾಗಿದ್ದು, ಆದೇಶವನ್ನು ವಾಪಸ್ಸು ಪಡೆದಿದೆ ಎಂದರು.