ಮೊದಲ ಬಾರಿ ಶಾಸಕರಾದವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ಇಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು: ನಿಗಮ-ಮಂಡಳಿಯಲ್ಲಿ ಮೊದಲ ಬಾರಿ ಶಾಸಕರಾದವರು ಮತ್ತು ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆದವರಿಗೆ ಸ್ಥಾನ ಕೊಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ, ಸುರ್ಜೇವಾಲ ಹಾಗೂ ನಾನು ಎಲ್ಲರೂ ಚರ್ಚೆ ಮಾಡಿ ಪಟ್ಟಿ ಅಂತಿಮ ಮಾಡಿದ್ದೇವೆ. ಸುರ್ಜೇವಾಲ ಹೈಕಮಾಂಡ್ ಬಳಿ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಇವತ್ತು ಚುನಾವಣೆ ಪ್ರಚಾರ ಮುಗಿಯುತ್ತದೆ. ಆದಷ್ಟು ಬೇಗ ಪಟ್ಟಿ ಬಿಡುಗಡೆ ಆಗುತ್ತದೆ ಎಂದರು.