ಡಿಕೆಶಿಗೆ ಬಿಗ್ ರಿಲೀಫ್: ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ಹಿನ್ನೆಲೆಯಲ್ಲಿ ಡಿಕೆಶಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇಲ್ಮನವಿ ವಾಪಸ್ ಗೆ ಅನುಮತಿ ನೀಡುವ ಮೂಲಕ ಡಿಕೆಶಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಹಾಗೂ ರಿಟ್ ಅನ್ನು ಡಿಕೆಶಿ ವಾಪಸ್ ಪಡೆದಿದ್ದಾರೆ. ಏತನ್ಮಧ್ಯೆ ಸಿಬಿಐ ಅನುಮತಿ ವಾಪಸ್ ಪಡೆದ ಸರ್ಕಾರದ ಕ್ರಮ ಆಕ್ಷೇಪಿಸಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪರಿಗಣಿಸಿಲ್ಲ.