ಉಡುಪಿ: ಮನೆಯಲ್ಲಿ ಚಿನ್ನಾಭರಣ ಕಳ್ಳತನ: 9 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಆರೋಪಿಯ ಬಂಧನ
ಉಡುಪಿ: ಇತ್ತೀಚೆಗೆ ಉಡುಪಿ ಇಂದಿರಾನಗರದ ಬಡಗಬೆಟ್ಟು ಗ್ರಾಮದ ಮನೆಯೊಂದರ ಹಿಂಬಾಗಿಲನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮಲ್ಲಾರಿನ ತೌಸಿಫ್ ಎಂದು ಗುರುತಿಸಲಾಗಿದೆ.
ಆರೋಪಿಯಿಂದ ಕಳ್ಳತನ ಮಾಡಿದ್ದ ಸುಮಾರು 155 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 9 ಲಕ್ಷ ಎಂದು ಅಂದಾಜಿಸಲಾಗಿದೆ.
ಆರೋಪಿ ಮನೆಯ ಹಿಂಬಾಗಿಲು ಮುರಿದು ಒಳ ಪ್ರವೇಶಿಸಿ ಲಾಕರಿನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದ, ಪ್ರಕರಣ ತಿನಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.