ಬ್ರಹ್ಮಾವರ: ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಮೃತ್ಯು
ಬ್ರಹ್ಮಾವರ: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ ಬಳಿ ನ. 29 ರ ಬುಧವಾರ ನಡೆದಿದೆ.
ಮೃತ ದ್ವಿಚಕ್ರ ವಾಹನ ಸವಾರನನ್ನು ಬ್ರಹ್ಮಾವರದ ಹಂದಾಡಿ ಗ್ರಾಮದ ಪ್ರೀತಂ ಡಿಸಿಲ್ವಾ (31) ಎಂದು ಗುರುತಿಸಲಾಗಿದೆ.
ಪ್ರೀತಂ ತಮ್ಮ ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದಾಗ ವೇಗವಾಗಿ ಬಂದ ಎಕ್ಸ್‌ಪ್ರೆಸ್ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಪ್ರೀತಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.