March 19, 2026

ಮಡಿಕೇರಿ: ವಿಚಾರಣೆಗೆ ಹಾಜರಾಗದೇ ತಲೆಮರೆಸಿದ್ದ 21 ಮಂದಿ ಆರೋಪಿಗಳ‌ ಬಂಧನ

0
image_editor_output_image-102414428-1701320849106.jpg

ಮಡಿಕೇರಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 21 ಆರೋಪಿಗಳಿಗೆ ನ್ಯಾಯಾಲಯ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ 21 ಮಂದಿ ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿಯ ವಿವಿಧ ಕಾಫಿ ಎಸ್ಟೇಟ್ ಸೇರಿದಂತೆ ಹಲವೆಡೆ ಪೊಲೀಸರು ಮುಂಜಾನೆ 5 ಗಂಟೆ ವೇಳೆಗೆ ದಾಳಿ ನಡೆಸಿದ್ದಾರೆ.

ಈ ವೇಳೆ ಕಳ್ಳತನ ಹಾಗೂ ಚೆಕ್ ಬೌನ್ಸ್ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 21 ಜನರನ್ನು ಬಂಧಿಸಲಾಗಿದೆ. ಬಂಧಿಸಲಾದ ಆರೋಪಿಗಳಿಗೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು,

ಆದರೂ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!