ಕಾರವಾರ: ಟಿಪ್ಪರ್ ಹರಿಸಿ ವ್ಯಕ್ತಿಯ ಕೊಲೆ
ಕಾರವಾರ: ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿಸಿ ಕೊಲೆಗೈದ ಘಟನೆ ಉತ್ತರಕನ್ನಡದ ಕಾರವಾರದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತನನ್ನು ಓಲ್ವಿನ್ ಲೋಬೋ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕೇಶವ ನಾಯ್ಕ ಹಾಗೂ ವಸಂತ ನಾಯ್ಕ ಎಂದು ಗುರುತಿಸಲಾಗಿದೆ.
ವಿನಾಯಕ ನಾರಾಯಣ ಭಟ್ ಎಂಬಾತ ಈ ಕೃತ್ಯ ಎಸಗಿದ್ದು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕೇಶವ ನಾಯ್ಕನ ಜೊತೆ ಜಗಳವಾಡಿದ್ದ ಎಂದು ತಿಳಿದು ಬಂದಿದೆ.