December 22, 2024

ಕುಂದಾಪುರ: 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

0

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.

ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

 

Leave a Reply

Your email address will not be published. Required fields are marked *

error: Content is protected !!