ರೈತರಿಗೆ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ಅರ್ಹ ರೈತರಿಗೆ ೨ ಸಾವಿರ ರೂ ವರೆಗೆ ಬೆಳೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ಕೇಂದ್ರಕ್ಕೆ ಬೆಳೆ ಪರಿಹಾರದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು .ಸೆ.21 ರಂದು ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು ಕೇಂದ್ರದ ತಂಡ 4/10 ರಿಂದ 9/10 ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ ಎಂದರು.”