ಗೃಹ ಪ್ರವೇಶ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ಅಪಘಾತ: ದಂಪತಿ ಸಾವು
ಬೆಂಗಳೂರು: ಗೃಹ ಪ್ರವೇಶ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ದಂಪತಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಳೆದ 23 ವರ್ಷಗಳ ವೈವಾಹಿಕ ಜೀವನದ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಇದೀಗ ಸಾವಲ್ಲೂ ಜೊತೆಯಾಗಿದ್ದಾರೆ.
ಹೀಗೆ ರಸ್ತೆಯ ಮೇಲೆ ರಕ್ತದ ಮಡುವಿನಲ್ಲಿ ಬಿದ್ದವರು ನಿರ್ಮಲಾ ಹಾಗೂ ಬೈಯಣ್ಣ. ಗುರುವಾರ ಹಾರಗದ್ದೆಯಲ್ಲಿ ಸಂಬಂಧಿಕರೊಬ್ಬರ ಗೃಹ ಪ್ರವೇಶ ಮುಗಿಸಿ ಹಿಂತಿರುಗುವಾಗ ಮೂರು ಗಂಟೆ ಸುಮಾರಿಗೆ ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ಇವರ ಬೈಕ್ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.