ಹಾಸನದ ಶಿಕ್ಷಕಿಯ ಅಪಹರಣ: ನೆಲ್ಯಾಡಿ ಬಳಿ ಆರೋಪಿಯ ಬಂಧನ
ಹಾಸನ: ಹಾಸನದಲ್ಲಿ ನಡೆದ ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣ ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 7 ಗಂಟೆಯೊಳಗೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ರಾಮು ಎಂದು ಗುರುತಿಸಲಾಗಿದ್ದು. ಈತ ಶಿಕ್ಷಕಿ ಅರ್ಪಿತಾ ಅವರಿಗೆ ಸಹೋದರ ಮಾವನಾಗಬೇಕು ಎಂದು ತಿಳಿದು ಬಂದಿದೆ.
ಕೊನೆಗೆ ಪೊಲೀಸರು ಸಂಜೆ ಐದು ಗಂಟೆ ಸುಮಾರಿಗೆ ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಆರೋಪಿ ರಾಮುನನ್ನು ಬಂಧಿಸುತ್ತಾರೆ. ಪೊಲೀಸರು ರಾತ್ರಿ ಅರ್ಪಿತಾರನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ. ಹಾಸನ ನಗರ ಪೊಲೀಸರ ಕಾರ್ಯಾಚರಣೆಗೆ ಕುಟುಂಬ ಸದಸ್ಯರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೇಫಾಗಿ ಮಗಳು ಮನೆ ಸೇರಿದ್ದಕ್ಕೆ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆರೋಪಿ ಅರ್ಪಿತಾ ಅವರನ್ನ ಮದುವೆಯಾಗಲು ಇಚ್ಚೆಪಟ್ಟಿದ್ದ ಆದರೆ ಆಕೆ ಮತ್ತು ಪೋಷಕರು ಇದಕ್ಕೆ ಒಪ್ಪಲಿಲ್ಲ ಎಂದು ತಿಳಿದು ಬಂದಿದ್ದು. ಇದರಿಂದ ಕೋಪಗೊಂಡ ಆರೋಪಿ ರಾಮು ಹೇಗಾದರು ಸರಿ ಅರ್ಪಿತಾಳನ್ನು ಮದುವೆಯಾಗಲೇ ಬೇಕೆಂದು ಗುರುವಾರ ಶಾಲೆಗೆ ಹೋಗುತ್ತಿದ್ದ ಅರ್ಪಿತಾರನ್ನು ಇನ್ನೋವಾ ಕಾರ್ ಅಪಹರಣ ಮಾಡಿದ್ದನು.
ಆರೋಪಿ ರಾಮು ಕಾರಿನಲ್ಲೇ ಯುವತಿಯ ಮನವೊಲಿಸಿ ತಾಳಿಕಟ್ಟಲು ಯತ್ನಿಸಿದ್ದಾನೆ. ಆದರೆ ಯುವತಿ ಇದಕ್ಕೆ ಒಪ್ಪಲಿಲ್ಲ.
ಇತ್ತ ಅಪಹರಣ ವಿಚಾರ ತಿಳಿಯುತ್ತಿದ್ದಂತೆ ಆಕ್ಟಿವ್ ಆದ ಹಾಸನ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯತ್ತ ಸಾಗುತ್ತಿದ್ದಾರೆ ಎಂಬ ವಿಚಾರ ಪೊಲೀಸರಿಗೆ ತಿಳಿಯುತ್ತದೆ.
ಕೂಡಲೆ ಪೊಲೀಸರು ಆರೋಪಿಗಳನ್ನು ಬೆನ್ನು ಹತ್ತುತ್ತಾರೆ. ಪೊಲೀಸರು ಬೆನ್ನ ಹತ್ತುತ್ತಲೇ ಕಾರಿನಲ್ಲಿ ರಾಮುನನ್ನು ಮಾತ್ರ ಬಿಟ್ಟು ಉಳಿದವರು ಎಸ್ಕೇಪ್ ಆಗುತ್ತಾರೆ.