ವಿಟ್ಲ;ಹೊರೈಝನ್ ಶಾಲೆ, ವಾರ್ಷಿಕ ಕ್ರೀಡಾ ಕೂಟ.
ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನ ವಾರ್ಷಿಕ ಕ್ರೀಡಾ ಕೂಟ ” ಉತ್ಕರ್ಷ್-2023″ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಗೋವಿಂದ ದೊಡ್ಡಮನಿ ಧ್ವಜಾರೋಹಣ ಮಾಡಿದರು. ಬಳಿಕ ಪಾರಿವಾಳ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಶಾಲೆಯ ಅಧ್ಯಕ್ಷ ಝುಬೈರ್ ಮಾಸ್ಟರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್, ಸಂಚಾಲಕ ಮಹಮ್ಮದ್ ಇಕ್ಬಾಲ್ ಹಾನೆಸ್ಟ್,ಕಾರ್ಯದರ್ಶಿ ನೋಟರಿ ಅಬೂಬಕರ್,ಲೆಕ್ಕ ಪರಿಶೋಧಕ ಇಕ್ಬಾಲ್ ಮೇಗಿನಪೇಟೆ, ಮೇಲ್ವಿಚಾರಕ ಗಫೂರ್ ಮೇಗಿನಪೇಟೆ, ಟ್ರಸ್ಟಿಗಳಾದ ಅಝೀಝ್ ಸನ, ಹನೀಫ್ ಎಂ.ಎ,ಇಕ್ಬಾಲ್ ಹಳೆಮನೆ,ಮಸೀದಿಯ ಅಧ್ಯಕ್ಷ ಇಕ್ಬಾಲ್ ಶೀತಲ್, ಕಾರ್ಯದರ್ಶಿ ಹಮೀದ್ ಬದ್ರಿಯಾ, ಕೋಶಾಧಿಕಾರಿ ಶರೀಫ್ ಪೊನ್ನೋಟು, ಅಬೂಬಕರ್ ಅನಿಲಕಟ್ಟೆ ಮುಂತಾದವರು ವೇದಿಕೆಯಲ್ಲಿದ್ದರು.
ಶಾಲಾ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು.
ಶಿಕ್ಷಕಿಯರಾದ ಫರ್ಝಾನ ನಿರೂಪಿಸಿದರು.
ಖೈರುನ್ನಿಸ ಧನ್ಯವಾದಗೈದರು.









