March 18, 2026

ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಬಂಧನಕ್ಕೊಳಗಾದ ಖಾಸಗಿ ಆಸ್ಪತ್ರೆಯ ನರ್ಸ್ ಮಾಹಿತಿ

0
image_editor_output_image50574133-1701497975329.jpg

ಬೆಂಗಳೂರು: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಆಗಿದ್ದ ಮಂಜುಳಾ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.

ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಭ್ರೂಣ ಹತ್ಯೆಯ ಕುರಿತು ಸ್ಫೋಟಕ ಮಾಹಿತಿಗಳನ್ನು ಇಂಚಿಚಾಗಿ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ.

ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು.

ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು.

4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂಬ ಭಯಾನಕ ವಿಚಾರ ಪೊಲೀಸರ ಮುಂದೆ ತೆರೆದಿಟ್ಟಿದ್ದಾಳೆ

Leave a Reply

Your email address will not be published. Required fields are marked *

You may have missed

error: Content is protected !!