ಪ್ಯಾನಿಕ್ ಬಟನ್, GPS ಡಿವೈಸ್ ಅಳವಡಿಕೆ ಕಡ್ಡಾಯ: ಆದೇಶ ಜಾರಿಗೊಳಿಸಿದ ಸಾರಿಗೆ ಇಲಾಖೆ
ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆ ಇದೇ ತಿಂಗಳಿನಿಂದ ಮಹತ್ವದ ಆದೇಶವೊಂದನ್ನು ಜಾರಿಗೊಳಿಸಿದೆ.
ಪರ್ಮಿಟ್ ವಾಹನಗಳು ಕಡ್ಡಾಯವಾಗಿ ಪ್ಯಾನಿಕ್ ಬಟನ್, GPS ಡಿವೈಸ್ ಅಳವಡಿಕೆ ಮಾಡುವಂತೆ ಆದೇಶದಲ್ಲಿ ಸೂಚಿಸಿದ್ದು, ಇದಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಸಾರಿಗೆ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದೆ.
ಈ ಬೆನ್ನಲ್ಲೇ ಡಿಸೆಂಬರ್ 1 ರಿಂದ (ಶುಕ್ರವಾರ) ರಾಜ್ಯದ ಪರ್ಮಿಟ್ ವಾಹನಗಳಿಗೆ ಪ್ಯಾನಿಕ್ ಬಟನ್ ಹಾಗೂ ಲೋಕೇಷನ್ ಟ್ರಾಕಿಂಗ್ ಡಿವೈಸ್ ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ.