ಡಿಹೆಚ್‌ಒ ಕಿರುಕುಳದಿಂದ ಬೇಸತ್ತ ವೈದ್ಯ ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು: ಮಂಡ್ಯ ಡಿಹೆಚ್‌ಒ ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.
ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಇವರು ಮಂಡ್ಯ ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.