May 9, 2026

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ತೆಲಂಗಾಣದಲ್ಲಿ ಕೈಗೆ ಜಯ

0
IMG-20231203-WA0007.jpg

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಭಾನುವಾರ (ಡಿ.03) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಲಿದ್ದು, ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ ಗೆ ಮುಖಭಂಗವಾಗಿದೆ.

ಸೋಮವಾರ (ಡಿ.4) ಮಿಜೋರಾಂ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯಲಿದೆ. ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಗೆ ರಾಜಸ್ಥಾನ ಮತ್ತು ಛತ್ತೀಸ್‌ ಗಢದಲ್ಲಿ ಭಾರೀ ಮುಖಭಂಗ ಅನುಭವಿಸಿದೆ.

ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್‌ ಸೋಲು ಕಂಡಿದ್ದು, ತೆಲಂಗಾಣದಲ್ಲಿ ಮಾತ್ರ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

Leave a Reply

Your email address will not be published. Required fields are marked *

error: Content is protected !!