February 4, 2026

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹಾಡಹಗಲೇ ಹೆದ್ದಾರಿಯಲ್ಲಿ ಹೆಜ್ಜೆ ಹಾಕಿದ ಆನೆ-ಆತಂಕದಲ್ಲಿ ವಾಹನ ಚಾಲಕರು

0
image_editor_output_image1707409475-1701619839621

ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ವಾಹನ ಸವಾರರು ಭಯಭೀತಿಯಿಂದ ಒಡಾಡುವಂತಾಗಿದೆ                      ಭಾನುವಾರ ಸಂಜೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಬಂದಿದ್ದರಿಂದ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಬ್ರಹತ್ ಗಾತ್ರದ ಒಂಟಿ ಸಲಗವು  ಒಂದು ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇದ್ದು ನಂತರ ತಿರುವಿನಲ್ಲಿ ಅರಣ್ಯಕ್ಕೆ ಸಾಗಿದ್ದು ವಾಹನ ಸವಾರರು ಕಾಡಾನೆಯ ವೀಡಿಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಆದರೆ ವಾಹನ ಸವಾರರಿಗೆ ಯಾವುದೇ ತೊಂದರೆ ಉಂಟು ಮಾಡಿಲ್ಲ. ಈ ಕಾಡಾನೆ  ಹೆಚ್ಚಾಗಿ ಚಾರ್ಮಾಡಿಯಲ್ಲಿ ಬೀಡು ಬಿಟ್ಟಿದ್ದು ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು, ದ್ವಿಚಕ್ರ ಸವಾರರು ಒಂಟಿ ಸಲಗದ ಭೀತಿಯಲ್ಲೇ ಸಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!