March 26, 2026

ಪುತ್ತೂರು: ಡೆತ್‌ನೋಟ್ ಬರೆದಿಟ್ಟು ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

0
image_editor_output_image1257616773-1701669044440.jpg

ಪುತ್ತೂರು: ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸು ವನಿತಾ..ಮಕ್ಕಳನ್ನು ನೋಡಿಕೋ’ ಎಂಬುದಾಗಿ ಡೆತ್‌ನೋಟ್ ಬರೆದಿಟ್ಟಿದ್ದದ್ದು ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯ, ಮಾಡ್ನೂರು ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಶಂಕರ(41ವ.)ಎಂದು ಗುರುತಿಸಲಾಗಿದೆ. ಶಂಕರ್ 5 ವರ್ಷಗಳ ಹಿಂದೆ ಸಾಲ ಮಾಡಿ ಜಾಗ ಖರೀದಿ ಮಾಡಿದ್ದು, ಸಾಲ ಮರುಪಾವತಿ ಚಿಂತೆಯಲ್ಲಿದ್ದ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ. ಡಿ.3ರಂದು ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪತ್ನಿ ವನಿತಾ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರ ಕರಣ ದಾಖಲಾಗಿದೆ

ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸು ವನಿತಾ..ಮಕ್ಕಳನ್ನು ನೋಡಿಕೋ’ ಎಂಬುದಾಗಿ ಡೆತ್‌ನೋಟ್ ಬರೆದಿಟ್ಟಿದ್ದದ್ದು ಪತ್ತೆಯಾಗಿದೆ.ವೀಪರಿತ ಸಾಲ ಮಾಡಿ ಸಾಲವನ್ನು ಕಟ್ಟಲಾಗದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ವನಿತಾ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!