ಮಂಗಳೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ:
ಒಟ್ಟು 16 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ
ಮಂಗಳೂರು: ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಘರ್ಷಣೆ ನಡೆದಿದೆ.
ಬಂಧಿತ ಆರೋಪಿಗಳನ್ನು ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹದ್, ಅಬುತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದೆ. ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿವರಗಳ ಪ್ರಕಾರ, ದೂರುದಾರ ಆದರ್ಶ ಪ್ರೇಮಕುಮಾರ್ (21)ಮೂಲತಃ ಕೇರಳದ ಕೊಲ್ಲಂ ನಿವಾಸಿಯಾಗಿದ್ದು, ನಗರದ ಕಾಲೇಜು ಒಂದರಲ್ಲಿ 3 ನೇ ವರ್ಷದ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್ ಮ ವಿದ್ಯಾರ್ಥಿಯಾಗಿದ್ದಾನೆ. ಈನಗರದ ಲೈಟ್ ಹೌಸ್ ಹಿಲ್ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದಾರೆ.




