May 9, 2026

ಬಂಟ್ವಾಳ: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ:
ಸವಾರ ಸ್ಥಳದಲ್ಲೇ ಮೃತ್ಯು

0
image_editor_output_image809291002-1701930658985

ಬಂಟ್ವಾಳ: ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.

ಡಿ.06 ರಂದು ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ ಸವಾರ ನಾರಾಯಣರವರು ಸ್ಕೂಟರ್‌ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದಾರೆ.

ಕೂಡಲೇ ಗಾಯಾಳುವನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ

ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 167/2023 ಕಲಂ: 279, 304(A) ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!