May 9, 2026

ಟಿಪ್ಪರ್ ಗೆ ಢಿಕ್ಕಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು: ಇಬ್ಬರು ಸಜೀವ ದಹನ

0
image_editor_output_image-679925024-1701931134766.jpg

ಬೆಳಗಾವಿ: ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಇಬ್ಬರು ಸಜೀವಾಗಿ ದಹನವಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಎಂದು ಗುರುತಿಸಲಾಗಿದೆ.

ಒಂದೇ ಕುಟುಂಬದ ನಾಲ್ವರು ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುತ್ತಿದ್ದರು. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಟಿಪ್ಪರ್‌ನ ಡಿಸೇಲ್ ಟ್ಯಾಂಕ್ ಒಡೆದು ಕೂಡಲೇ ಬೆಂಕಿ ಹೊತ್ತಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!