March 18, 2026

ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-636220622-1701931444336.jpg

ತಿರುವನಂತಪುರಂ: ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ ಮಂಗಳವಾರ ಬೆಳಗ್ಗೆ ಕಾಲೇಜು ಬಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಶಹಾನಾ ಪೋಷಕರು ದೂರು ನೀಡಿದ್ದು, ಘಟನೆ ಸಂಬಂಧ ಯುವ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ: ಶಹಾನಾ ಗೆ ಮದುವೆ ನಿಗದಿಯಾಗಿದ್ದು ಅದರಂತೆ ಯುವ ವೈದ್ಯ ರುವೈಸ್ ಎಂಬುವವರ ಜೊತೆ ಮದುವೆ ಮಾತುಕತೆ ನಡೆದಿತ್ತು, ಈ ನಡುವೆ ಹುಡುಗನ ಕಡೆಯವರು ವರದಕ್ಷಿಣೆ ರೂಪದಲ್ಲಿ 150 ಪವನ್ ಚಿನ್ನ, 15 ಎಕರೆ ಜಾಗ ಜೊತೆಗೆ ಬಿಎಂಡಬ್ಲ್ಯೂ ಕಾರು ನೀಡುವಂತೆ ಕೇಳಿಕೊಂಡಿದ್ದಾರೆ ಆದರೆ ಶಹಾನಾ ಮನೆಯವರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಉತ್ತಮವಾಗಿರಲಿಲ್ಲ, ಆದರೂ ಐದು ಎಕರೆ ಜಾಗ ಜೊತೆಗೆ ಕಾರು ನೀಡಲು ಶಹಾನಾ ಕುಟುಂಬ ಮುಂದಾಗಿತ್ತು ಆದರೆ ರುವೈಸ್ ಕುಟುಂಬದವರು ತಾವು ಹೇಳಿದ್ದಷ್ಟೇ ನೀಡಬೇಕೆಂದು ಹಠಹಿಡಿದಿದ್ದರು ಆದರೆ ಅಷ್ಟೊಂದು ವರದಕ್ಷಿಣೆ ನೀಡಲು ಆಗುವುದಿಲ್ಲ ಎಂದಾಗ ರುವೈಸ್ ಕುಟುಂಬ ಶಹಾನಾ ಮದುವೆ ವಿಚಾರದಿಂದ ದೂರ ಉಳಿಯಲು ಪ್ರಾರಂಭಿಸಿದ್ದಾರೆ ಇದರಿಂದ ಮನನೊಂದ ಶಹಾನಾ ತಾನು ಇದ್ದ ರೂಮಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತ ಮಗಳು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ತಿಳಿಯುತ್ತಲೇ ಶಹಾನಾ ಪೋಷಕರು ಪೊಲೀಸ್ ಠಾಣೆಯಲ್ಲಿ ರುವೈಸ್ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!