March 18, 2026

ACC ಸಿಮೆಂಟ್ ಕಂಪೆನಿಯ ಇಂಜಿನಿಯರ್ ಆತ್ಮಹತ್ಯೆ

0
image_editor_output_image1340968695-1701932003115.jpg

ಕಲ್ಬುರ್ಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಒಡೆತನದ ಎಸಿಸಿ ಸಿಮೆಂಟ್ ಕಂಪನಿಯಲ್ಲಿ ಇಂಜಿನಿಯರಿಂಗ್‌ ಆಗಿ ಸೇವೆ ಸಲ್ಲಿಸುತ್ತಿದ್ದ ರಮೇಶ್ ಪವಾರ್ (45) ಕಂಪನಿ ಆಡಳಿತ ಅಧಿಕಾರಿಗಳು ನೀಡಿದ ಮಾನಸಿಕ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.7ರ ಗುರುವಾರ ಬೆಳಗ್ಗೆ ವಾಡಿ ಪಟ್ಟಣದ ಎಸಿಸಿ ಕಾಲೋನಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಇಂಜಿನಿಯರ್ ರಮೇಶ್ ಪವಾರ್ ಅವರು ಚಿತ್ತಾಪುರ ಮತಕ್ಷೇತ್ರದ ಮಾಜಿ ಶಾಸಕ ಬಿಜೆಪಿಯ ನಾಯಕ ದಿವಂಗತ ವಾಲ್ಮೀಕಿ ನಾಯಕ ಅವರ ಮಗಳ ಪತಿ. ಎಸಿಸಿಯ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 26 ವಾರ್ಷಗಳಿಂದ ಎಸಿಸಿ ಕಂಪನಿಯಲ್ಲಿ ಇಂಜಿನಿಯರಿಂಗ್‌ ಆಗಿ ಸೇವೆ ಸಲ್ಲಿಸುತ್ತಿರುವ ರಮೇಶ್ ಪವಾರ್, ಕಾರ್ಮಿಕರ ಸಮಸ್ಯೆಗಳ ವಿರುದ್ಧ ದನಿಯೆತ್ತಿದ್ದರೂ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!