May 9, 2026

ಕಾರವಾರ: KSRTC ಬಸ್ ಢಿಕ್ಕಿ: ಕಾರಿನಲ್ಲಿದ್ದ ಐವರು ದಾರುಣ ಸಾವು

0
image_editor_output_image-1221210165-1702023152687.jpg

ಕಾರವಾರ : ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ.

ಕಾರಿನಲ್ಲಿದ್ದವರು ತಮಿಳುನಾಡು ಮೂಲದವರು ಎಂದು ಹೇಳಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಕೆಎಸ್ಆರ್ ಟಿಸಿ ಬಸ್ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದು, ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!