May 9, 2026

ಧರ್ಮಸ್ಥಳ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನೇತ್ರಾವತಿ ನದಿಗೆ ಬಿದ್ದು ಸಾವು

0
image_editor_output_image-586760757-1702108527286.jpg

ಕಲ್ಮಂಜ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬರು ನದಿಗೆ ಬಿದ್ದು, ಸಾವನ್ನಪ್ಪಿದ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೇಶವ ಎಂಬವರು ಸಮೀಪದ ನದಿಗೆ ಡಿ.7 ರಂದು ರಾತ್ರಿ ಮೀನು ಹಿಡಿಯಲು ಹೋಗಿದ್ದು, ಡಿ.8 ರಂದು ಬೆಳಿಗ್ಗೆ ಅವರ ಶವ ನದಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!