May 13, 2026

ಕರ್ಣಿ ಸೇನಾ ಮುಖ್ಯಸ್ಥ ಗುಂಡಿಕ್ಕಿ ಹತ್ಯೆ: ಇಬ್ಬರು ಶೂಟರ್‌ ಸಹಿತ ಮೂವರ ಬಂಧನ

0
image_editor_output_image2084826057-1702200930143.jpg

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಶೂಟರ್‌ಗಳು ಮತ್ತು ಒಬ್ಬ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಕ್ರೈಂ ಬ್ರಾಂಚ್ ಮತ್ತು ರಾಜಸ್ಥಾನ ಪೊಲೀಸರು ತಡರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿ ಚಂಡೀಗಢದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಶೂಟರ್‌ಗಳಾದ ರೋಹಿತ್ ರಾಥೋಡ್, ನಿತಿನ್ ಫೌಜಿ ಹಾಗೂ ಸಹಚರ ಉಧಮ್ ಬಂಧಿತ ಆರೋಪಿಗಳು. ಈ ಹತ್ಯೆ ಪ್ರಕರಣದಲ್ಲಿ ಉಧಮ್ ಪಾತ್ರ ಏನು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!