March 18, 2026

ಮೂಡಿಗೆರೆ: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ

0
image_editor_output_image1754189281-1702202689591.jpg

ಕೊಟ್ಟಿಗೆಹಾರ: ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ.

ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇಜವಬ್ದಾರಿ ಹಾಗೂ ಅತಿ ವೇಗವಾಗಿ ಬಸ್‌ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಪಘಾತದ ಪರಿಣಾಮ ಎರಡು ಬಸ್ಸಿನ ಚಾಲಕರಿಗೆ ತುಸು ಹೆಚ್ಚಾಗಿ ಗಾಯವಾಗಿದೆ. ಏಕೆಂದರೆ ಬಸ್ಸುಗಳು, ಮುಖಾಮುಖಿ ಡಿಕ್ಕಿಯಾದ ಸಂದರ್ಭದಲ್ಲಿ ಕೂಡ ಎರಡು ಬಸ್ಸಿನ ಡ್ರೈವರ್ ಸೀಟಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾಗಾಗಿ, ಎರಡು ಬಸ್ಸಿನ ಚಾಲಕರಿಗೂ ತುಸು ಹೆಚ್ಚಾಗಿ ಗಾಯವಾಗಿದೆ.

Leave a Reply

Your email address will not be published. Required fields are marked *

error: Content is protected !!