May 9, 2026

ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

0
image_editor_output_image-283368344-1702361398180.jpg

ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಡಿ.10ಕ್ಕೆ ಬೆಳಿಗ್ಗೆ ಪತ್ತೆಯಾಗಿದೆ.

ನೇತ್ರಾವತಿ ನದಿಯಲ್ಲಿ ಭಕ್ತರು ಸ್ನಾನ ಮಾಡುತ್ತಿದ್ದಾಗ ಶವವೊಂದು ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು ಪೊಲೀಸರು ಉಜಿರೆ ಘಟಕ ಪ್ರತಿನಿಧಿ ರವೀಂದ್ರ ಇವರಿಗೆ ಫೋನ್ ಕರೆ ಮಾಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಇವರು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಾದ ಶಿಶಿಲ- ಅರಿಸಿನಮಕ್ಕಿ ಘಟಕದ ಅವಿನಾಶ್ ಬಿಡೆ, ಉಜಿರೆ ಘಟಕದ ರಾಘವೇಂದ್ರ, ಶಶಿಕುಮಾ‌ರ್ ಇವರೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.

ಪೊಲೀಸ್‌ ಠಾಣಾಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಶವವನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!