ವಿವಾದಕ್ಕೆ ಕಾರಣವಾದ ‘ಬುರ್ಖಾ ತೆಗೆದು ಒಳಗೆ ಬನ್ನಿ’ ಸೂಚನಾ ಫಲಕ
ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿರುವ ಸೂಚನಾ ಫಲಕವೊಂದು ವಿವಾದಕ್ಕೆ ಕಾರಣವಾಗಿದೆ. ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದ ಸೂಚನಾ ಫಲಕವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ ಸೂಚನಾ ಫಲಕವನ್ನು ಹಾಕಲಾಗಿದೆ. ರೋಗಿಗಳ ಇಸಿಜಿ ತೆಗೆಯುವ ರೂಮ್ ಬಾಗಿಲಿನಲ್ಲಿದ್ದ ಫಲಕವನ್ನು ಕಳೆದ ಒಂದು ವರ್ಷದ ಹಿಂದೆಯೇ ಹಾಕಲಾಗಿತ್ತು. ಸೂಚನಾ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದು ಹರಿಯ ಬಿಡಲಾಗಿತ್ತು. ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ ನಲ್ಲೂ ಈ ಪೋಸ್ಟ್ ಕಾಣಿಸಿಕೊಂಡಿತ್ತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸೂಚನಾ ಫಲಕ ತೆರವುಗೊಳಿಸಲಾಗಿದೆ.




