September 20, 2024

ರಾಜ್ಯದಲ್ಲಿ 365 ಕೊರೋನಾ ಪ್ರಕರಣ ದಾಖಲು: 8 ಮಂದಿ ಮೃತ್ಯು

0

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 365 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,849ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 8 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,984ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 443 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,37,848ಕ್ಕೆ ಏರಿಕೆಯಾಗಿದೆ. ಇನ್ನು 8,988 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,17,713 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 365 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.31ಕ್ಕೆ ಇಳಿದಿದೆ.

Leave a Reply

Your email address will not be published. Required fields are marked *

error: Content is protected !!