March 18, 2026

ಕುಂದಾಪುರ: 10 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪಿಡಿಒ

0
image_editor_output_image1519587818-1702446006518.jpg

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿನಿಮಿಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಬಂಧಿತರನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಎಂದು ಗುರುತಿಸಲಾಗಿದೆ. ಈತ ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು ನಾಲ್ಕು ಕಂತಿನಲ್ಲಿ 1.20ಲಕ್ಷ ರೂ. ಹಣ ಬಿಡುಗಡೆಯಾಗಿದ್ದು, ಹಣ ಬಿಡುಗಡೆ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದು, ಅದರಂತೆ ಕಾರ್ಯಾ ಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ತೆಕ್ಕಟ್ಟೆ ಜಂಕ್ಷನ್‌ನಲ್ಲಿ ದೂರುದಾರರಿಂದ 10ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಜಯಂತ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೆಕ್ಕಟ್ಟೆ ಪ್ರಮುಖ ಭಾಗದಲ್ಲಿ ಪಿಡಿಒ ಬೈಕ್‌ನಲ್ಲಿ ಬಂದು ಪಲಾನುಭವಿ ಅವರಿಂದ ಲಂಚದ ಹಣ ರೂ. 10 ಸಾವಿರವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಹೊಂಚು ಹಾಕಿ ಕುಳಿತಿದ್ದ ಉಡುಪಿ ಲೋಕಾಯುಕ್ತ ಪೊಲೀಸರ ತಂಡ ಸಿನಿಮೀಯ ಮಾದರಿಯಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿತ್ತು.

Leave a Reply

Your email address will not be published. Required fields are marked *

You may have missed

error: Content is protected !!