March 18, 2026

ಉಡುಪಿ: ಎಲ್ಲಾ ಮೆಡಿಕಲ್, ಫಾರ್ಮಸಿ ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಕಡ್ಡಾಯ

0
image_editor_output_image2057905576-1702447218180.jpg

ಉಡುಪಿ: ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ X ಮತ್ತು H ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ ವೈದ್ಯಕೀಯ/ಫಾರ್ಮಸಿ ಅಂಗಡಿ ಮಾಲೀಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲಾ ಔಷಧ ನಿಯಂತ್ರಕರು ಸದ್ರಿ ಅಂಗಡಿಗಳಲ್ಲಿ ಸಿ.ಸಿ ಟಿವಿ ಅಳವಡಿಸಿರುವ ಕುರಿತು ತಪಾಸಣೆ ನಡೆಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಮೆಡಿಕಲ್/ಫಾರ್ಮಸಿ ಅಂಗಡಿ ಮಾಲೀಕರ ವಿರುದ್ದ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!