June 28, 2026

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ: ಆರೋಪಿ ಭಾಸ್ಕರ್ ಬಂಧನ

0
image_editor_output_image1047071399-1702447699630.jpg

ಬೆಂಗಳೂರು: ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ವಡ್ಡಹಳ್ಳಿಯ ನಿವಾಸಿ ಭಾಸ್ಕರ್‍ ಎಂದು ಗುರತಿಸಲಾಗಿದೆ.

ಇತ್ತೀಚೆಗೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದ ಸುದ್ದಿಯನ್ನು ಭಾಸ್ಕರ್ ತಿಳಿದುಕೊಂಡಿದ್ದ. ಈ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದ ಬಗ್ಗೆಯೂ ತಿಳಿದುಕೊಂಡಿದ್ದ.

ಸೋಮವಾರ ಊರಿನಿಂದ ಬೆಂಗಳೂರಿಗೆ ಬಂದಿದ್ದ ಈತ ಬೆಂಗಳೂರು ಪೊಲೀಸರನ್ನು ಮತ್ತೆ ಆಟವಾಡಿಸಬೇಕು ಎಂದು ನಿರ್ಧರಿಸಿದ್ದ. ಇದಕ್ಕಾಗಿ ಗೂಗಲ್ ನಲ್ಲಿ ಸರ್ಚ್ ಮಾಡಿ ಎನ್ಐಎ ನಂಬರ್ ಪಡೆದುಕೊಂಡಿದ್ದ ನಂತರ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದ , ಕರೆ ಕಟ್ ಮಾಡಿ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದ.

ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಂತೆಯೇ ಪೊಲೀಸರು ಬಾಂಬ್ ಬೆದರಿಕೆ ಕರೆ ನಂತರ ಕರೆ ಬಂದ ನೆಟ್ವರ್ಕ್ ಟ್ರ್ಯಾಕ್ ಮಾಡುತ್ತಿದ್ದರು. ಆದರೆ ಆರೋಪಿ ಬೆಂಗಳೂರಿನಿಂದ ನೇರವಾಗಿ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದ. ಅಂತೆಯೇ ಚಿತ್ತೂರಿನಿಂದ ತನ್ನೂರಿಗೆ ವಾಪಸ್ ಆಗುವಾಗ ಭಾಸ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ವಿಧಾನಸೌಧ ಠಾಣೆ ಪೊಲೀಸರು ಭಾಸ್ಕರ್ ನ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!