May 9, 2026

ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ: ಮಹಿಳೆ ಸಾವು

0
image_editor_output_image-1939437284-1702449586964.jpg

ಚಿಕ್ಕಬಳ್ಳಾಪುರ: ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗದ ನಿಮ್ಮಾಕಲಕುಂಟೆ ಬಳಿ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ಮಹಿಳೆ ನಾರಾಯಣಮ್ಮಗೆ (50) ಬೈಕ್ ಡಿಕ್ಕಿ ಹೊಡೆದಿದೆ.

ತಲೆಗೆ ಪೆಟ್ಟಾಗಿ ಕುಸಿದು ಬಿದ್ದಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!