May 9, 2026

ಕೊಳ್ನಾಡು: ಕುಳಾಲು ಸರಕಾರಿ ಶಾಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ-ಶಾಲಾ ವಾರ್ಷಿಕೋತ್ಸವ

0
image_editor_output_image-116176458-1702468856427

ವಿಟ್ಲ: ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ ಕುಳಾಲು, ಬಂಡಮುಗೇರು, ಮುಂಡಾಜೆಕಾನ, ಕುಂಟ್ರಕಳ ಹಾಗೂ ಕುದ್ರಿಯ ಸಂಯುಕ್ತ ಆಶ್ರಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭ ಹಾಗೂ ಶಾಲಾ ವಾರ್ಷಿಕೋತ್ಸವ ನಡೆಯಿತು. ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ರಫ್ ಸಾಲೆತ್ತೂರು ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು. ವಿಶೇಷ ಆಹ್ವಾನಿರರಾಗಿ ಆಗಮಿಸಿದ ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ ಸರಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ, ಶಿಕ್ಷಕರ ಪಾತ್ರ ಮಹತ್ವದಾಗಿದೆ. ಸರಕಾರಿ ಶಾಲೆಗಳನ್ನು ಉಳಿಸಿದಾಗ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು. ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಬಾಶ್ಚಂದ್ರ ಶೆಟ್ಟಿ ಕುಳಾಲು , ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ಸದಸ್ಯ ರಾದ ರತ್ನ, ಸಂಜೀವಿ, ಭಾಗೀರಥಿ, ಪದ್ಮನಾಭ, ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ , ಕುವೈಟ್ ತುಳುಕೂಟ ದ ಅಧ್ಯಕ್ಷ ಸನತ್ ಕುಮಾರ್ ರೈ, ಹಿರಿಯ ವಿದ್ಯಾರ್ಥಿ ಸಂಕಪ್ಪ ಪೂಜಾರಿ ದರ್ಮೆಂದ್ರ ರೈ, ವರ್ಗಾವಣೆ ಗೊಂಡ ಶಿಕ್ಷಕ ವಿಜಯ್ ಕುಮಾರ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶರೀಫ್, ಉಪಾಧ್ಯ ರಮೇಶ್ ಕಾಮತ್ ಉಪಸ್ಥಿತರಿದ್ದರು. ಮುಖ್ಯಪಾಧ್ಯಾಯ ತಿಮ್ಮು ಸ್ವಾಗತಿದರು. ಶಿಕ್ಷಕರಾದ ಪರಮೇಶ್ವರ್ ನಿರೂಪಿಸಿದರು. , ಹೇಮಾ ಮಾಸ್ತರ್ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!