May 9, 2026

ದ.ಕ ಉಡುಪಿ ಸೇರಿ ರಾಜ್ಯದಲ್ಲಿ ಡಿ17 ರಿಂದ 3 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

0
image_editor_output_image-13273175-1702554977922

ದ.ಕ ಉಡುಪಿ ಸೇರಿ ರಾಜ್ಯದಲ್ಲಿ ಡಿ17 ರಿಂದ 3 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಡಿಸೆಂಬರ್ 17 ರಿಂದ ಮೂರು ದಿನ ಮತ್ತೆ ಜೋರಾಗಿ ಮಳೆ ಸುರಿಯಲಿದೆ ಎಂದು  ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಡಿಸೆಂಬರ್ 17 ರಿಂದ ಮತ್ತೆ ಮಳೆ ಅಬ್ಬರ ಜೋರಾಗಲಿದೆ. ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಆಗುವ ಲಕ್ಷಣಗಳು ಇವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕ ಮಗಳೂರು, ಮೈಸೂರು, ರಾಮನಗರ ಈ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಸಾಧಾರಣ ಮಳೆ ಆಗಲಿದ್ದರೆ ಒಂದೆರಡು ಕಡೆಗಳಲ್ಲಿ ಅತ್ಯಧಿಕ ಪ್ರಮಾಣದ ಮಳೆ ಆಗಲಿದೆ ಎಂದು ತಿಳಿಸಿದೆ. ಸದ್ಯ ರಾಜ್ಯದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದ್ದು ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ.

Leave a Reply

Your email address will not be published. Required fields are marked *

error: Content is protected !!