May 9, 2026

ಸುಳ್ಯ: SSLC ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image-593001904-1702631309766.jpg

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಎಸ್‌ಎಸ್‌ ಎಲ್‌ ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎಲಿಮಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಮೃತ ವಿದ್ಯಾರ್ಥಿಯಾಗಿದ್ದಾನೆ.

ಮೂಲತಃ ಚೊಕ್ಕಾಡಿಯವರಾಗಿರುವ, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ ಶಮಂತ್ ಶುಕ್ರವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಆವರಣದ ಶೌಚಾಲಯದ ಹಿಂಬದಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಮಂತ್ ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿದ್ದ ಈತ ಸಾವಿನ ದವಡೆಯಿಂದ ಪಾರಾಗಿದ್ದ. ಈತನ ಚಿಕಿತ್ಸೆಗಾಗಿ ನೂರಾರು ದಾನಿಗಳು ಹಣಕಾಸು ನೆರವು ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!