March 18, 2026

ಟೈಯರ್ ಸ್ಫೋಟಗೊಂಡು ಖಾಸಗಿ ಬಸ್ ಬೆಂಕಿಗಾಹುತಿ

0
image_editor_output_image-470651185-1702633614507.jpg

ವಿಜಯಪುರ: ನಗರ ಹೊರ ವಲಯದ ಹಿಟ್ಟನಹಳ್ಳಿ ಬಳಿ ಚಿತ್ರದುರ್ಗ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ (ಎನ್. ಎಚ್ 50)ಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದ ಖಾಸಗಿ ಬಸ್ ‘ಜನತಾ ಟ್ರಾವೆಲ್ಸ್’ ಗೆ ಬೆಂಕಿ ಹೊತ್ತಿ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬಸ್ ಟೈರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಅದರಲ್ಲಿದ್ದ 25 ಪ್ರಯಾಣಿಕರು ಕೆಳಗಿಳಿದ ಕಾರಣ ಯಾರಿಗೂ ಅಪಾಯವಾಗಿಲ್ಲ.

ಬಸ್‌ಗೆ ಹೊತ್ತಿಕೊಂಡ ಬೆಂಕಿ ಕ್ಷಣ ಮಾತ್ರದಲ್ಲಿ ಇಡೀ ಬಸ್‌ಗೆ ವ್ಯಾಪಿಸಿದೆ. ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು, ಒಡವೆ ಸುಟ್ಟು ಭಸ್ಮವಾಗಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕ‌ದಳ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!