ಕಡಬ: ತೋಟದಲ್ಲಿದ್ದ ಕಾರ್ಮಿಕರನ್ನು ಬೆನ್ನಟ್ಟಿ ಕಾಡಾನೆಗಳು: ಮೂವರಿಗೆ ಗಾಯ
ಕಡಬ: ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ.
ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.
ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ.




