February 4, 2026

ಕಡಬ: ರಾತ್ರಿ ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ, ವಿಕಲಚೇತನ ಸಾವು

0
image_editor_output_image1475348041-1702710485921.jpg

ಕಡಬ: ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನೊಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮುಖ್ಯ ಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮುಂಬಯಿ ಮೂಲದ ಕುಟುಂಬವೊಂದು ಮಂಗಳೂರಿನಿಂದ ಬಾಡಿಗೆ ಕಾರಲ್ಲಿ ಕಡಬ ಮಾರ್ಗವಾಗಿ ಸುಬ್ರಹ್ಮಣ್ಯ ಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಕಡಬದ ಮುಖ್ಯ ಸರ್ಕಲ್ ಸಮೀಪ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿತ್ತು .ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರ ಅಣ್ಣ ನೀಡಿದ ದೂರಿನಂತೆ ಕಾರು ಚಾಲಕನ ವಿರುದ್ದ ಠಾಣೆಯಲ್ಲಿ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!